HEALTH TIPS

ಪಂಚಾಯಿತಿಗಳಲ್ಲಿ ಮಹಿಳಾ ಮೀಸಲು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

               ವದೆಹಲಿ: ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳಲ್ಲೂ ಪರೋಕ್ಷವಾಗಿ ಪುರುಷರೇ ಅಧಿಕಾರ ಚಲಾಯಿಸುತ್ತಿದ್ದು, ಇದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

                 ಈ ಕುರಿತು ಪಂಚಾಯತ್ ರಾಜ್‌ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ಸೂಚಿಸಿತು.

                 ಈ ಸಂಬಂಧ ಅರ್ಜಿ ಸಲ್ಲಿಸಿದ್ದ ಉತ್ತರ ಪ್ರದೇಶ ಮೂಲದ ಸಂಸ್ಥೆಯ ಪರ ವಕೀಲರಿಗೆ, 'ನಾವು ಕಾನೂನು ಜಾರಿ ಪ್ರಾಧಿಕಾರವಲ್ಲ' ಎಂದು ತಿಳಿಸಿತು.

               ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌, ಸುಧಾಂಶು ಧುಲಿಯಾ ಅವರಿದ್ದ ಪೀಠ ಅರ್ಜಿಯನ್ನು ಪರಿಶೀಲಿಸಿತು. 'ಮಹಿಳೆಯರಿಗೆ ಮೀಸಲಾತಿ ಕುರಿತು 30 ವರ್ಷದ ಹಿಂದೆಯೇ ಕಾಯ್ದೆಯಾಗಿದೆ. ಆದರೆ, ಪರಿಣಾಮಕಾರಿಯಾಗಿ ಜಾರಿ ಆಗುತ್ತಿಲ್ಲ' ಎಂದು ಅರ್ಜಿದಾರರು ಹೇಳಿದರು.

                    ಸರ್ಕಾರದ ಸಂಬಂಧಿಸಿದ ಇಲಾಖೆಗೆ ಈ ಕುರಿತು ಮನವಿಯನ್ನು ಸಲ್ಲಿಸಲಾಗಿದೆಯೇ ಎಂದು ಪ್ರಶ್ನಿಸಿದ ಪೀಠವು, ಈ ಅರ್ಜಿಯಲ್ಲಿ ಎತ್ತಲಾದ ವಿಷಯಕ್ಕೆ ಪರಿಹಾರ ಕಂಡುಕೊಳ್ಳುವ ಯಾವುದೇ ಉದ್ದೇಶವನ್ನು ಈ ಅರ್ಜಿಯು ಒಳಗೊಂಡಿಲ್ಲ ಎಂದು ಅಭಿಪ್ರಾಯಪಟ್ಟಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries