HEALTH TIPS

ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

            ಬೆಂಗಳೂರು: ರಾಜ್ಯದಲ್ಲಿ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

           ಈ ಮೂಲಕ ಪೊಲೀಸರು ದೊಡ್ಡ ಭಯೋತ್ಪಾದಕ ಸಂಚನ್ನು ತಪ್ಪಿಸಿದ್ದು, ಸೈಯದ್ ಸುಹೇಲ್, ಉಮರ್, ಜುನೈದ್, ಮುದಾಸಿರ್ ಮತ್ತು ಜಾಹಿದ್ ಎಂಬುವವರನ್ನು ಬಂಧಿಸಿದ್ದಾರೆ.

               ಈ ಆರೋಪಿಗಳಿಂದ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ 4 ಗ್ರೆನೈಡ್​​ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.
                 ಈ ಆರೋಪಿಗಳು 2017ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಜೈಲು ಶಿಕ್ಷೆಯನ್ನು ಎದುರಿಸುತ್ತಿದ್ದ ವೇಳೆ ಜಮಾತ್-ಎ-ಇಸ್ಲಾಮಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿ ತಾವೂ ಸಂಘಟನೆ ಸೇರುವುದರ ಬಗ್ಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದ್ದು, ತಾವು ಎಲ್ಲದಕ್ಕೂ ರೆಡಿ ಎಂದು ಉಗ್ರರಿಗೆ ಹೇಳಿದ್ದರು.

                   ಈ ಬೆನ್ನಲ್ಲೇ ವಿದ್ವಂಸಕ ಕೃತ್ಯದ ಬಗ್ಗೆ ಜಮತ್ ಇ ಇಸ್ಲಾಮಿ ಸಂಘಟನೆಯ ಹ್ಯಾಂಡ್ಲರ್ಸ್ ಮೂಲಕ ಟ್ರೈನಿಂಗ್​​ ನೀಡುವುದರ ಜತೆಗೆ ಸುಲ್ತಾನ್ ಪಾಳ್ಯದಲ್ಲಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲೆ ವಾಸವಿದ್ದ ಶಂಕಿತರು, ವಿದ್ವಂಸಕ ಕೃತ್ಯ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ಮಾಡುತ್ತಿದ್ದರು.
                                        ಟಾರ್ಗೆಟ್ ಬೆಂಗಳೂರು:
               ಬೆಂಗಳೂರು ಸಿಟಿಯನ್ನು ಟಾರ್ಗೆಟ್ ಮಾಡಿದ್ದ ಶಂಕಿತ ಉಗ್ರರು, ವಿದ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದಿದ್ದರು. ಅಲ್ಲದೇ. ಬೆಂಗಳೂರಿನಲ್ಲಿ ಎಲ್ಲೆಲ್ಲಿ, ಏನು, ಹೇಗೆಲ್ಲಾ ಸ್ಫೋಟಿಸಬೇಕು ಎನ್ನುವುದರ ಬಗ್ಗೆ ಟ್ರೈನಿಂಗ್ ಪಡೆದಿದ್ದ ಶಂಕಿತರು, ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್​​ಗೆ ಪ್ಲಾನ್ ಮಾಡಿದ್ದರು. ಎಲ್ಲಾ ಕಡೆಯೂ ಆಯಕ್ಟೀವ್ ಆಗಿದ್ದ ಶಂಕಿತರ ಟೀಂ, ಎಲ್ಲಾ ಪ್ಲಾನ್ ಮಾಡಿಕೊಂಡು ಅದನ್ನು ಕಾರ್ಯಗತಗೊಳಿಸಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries