ಮುಳ್ಳೇರಿಯ: ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಾಚನಾ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಮುಖ್ಯಶಿಕ್ಷಕಿ ವಾರಿಜಾ ನೇರೋಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಟಾಫ್ ಸೆಕ್ರೆಟರಿ ದಾಸಪ್ಪ ಮಾಸ್ಟರ್, ಎಸ್.ಆರ್.ಜಿ ಕನ್ವೀನರ್‍ಗಳಾದ ನಜುಮ್ಮುನ್ನಿಸಾ ಟೀಚರ್, ಜಲಜಾಕ್ಷಿ ಟೀಚರ್, ಶಾರದಾ ಟೀಚರ್, ವಿದ್ಯಾರಂಗ ಕಲಾಸಾಹಿತ್ಯ ವೇದಿಕೆಯ ಸಂಚಾಲಕರಾದ ವಿರೋಣಿ ನೀತು ಮತ್ತು ಯಾಸರ್ ಮಾಸ್ಟರ್ ಉಪಸ್ಥಿತರಿದ್ದರು.
ಈ ಸಂದರ್ಭ ವಿದ್ಯಾರ್ಥಿಗಳು ತಯಾರಿಸಿದ ಹಸ್ತಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ವಾಚನಾ ಮಾಸಾಚರಣೆಯ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಾದ ಆಯಿಷತ್ ಲಾಝಿಮಾ ಸ್ವಾಗತಿಸಿದರು. ಶಿಕ್ಷಕ ಧನಿಲ್.ಪಿ. ಕಾರ್ಯಕ್ರಮ ನಿರೂಪಿಸಿದರು. ಸಾನ್ವಿಕಾ ವಂದಿಸಿದಳು. ಈ ಸಂದರ್ಭ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.





