HEALTH TIPS

ಕೃತಕ ನೆರೆಯ ನೀರಿಗಿಳಿದು ದುರಸ್ತಿ: ಮೆಸ್ಕಾಂ ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ

                 ಳ್ಳಾಲ : ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಸೃಷ್ಟಿಯಾಗಿದ್ದ ಕೃತಕ ನೆರೆಯ ನಡುವೆ ಸಾಗಿ, 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವಿಡಿಯೊವನ್ನು ಮೆಸ್ಕಾಂ ಜೆ.ಇ. ನಿತೇಶ್ ಹೊಸಗದ್ದೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

                  ಬೆಳ್ಮ ಗ್ರಾಮದ ಬೆರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ, 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು.

                 ಸ್ಥಳಕ್ಕೆ ಮೆಸ್ಕಾಂನ ಪವರ್ ಮೆನ್ ವಸಂತ್ ಹಾಗೂ ಸುರೇಶ್ ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿನಿಂದ ಆವೃತಗೊಂಡಿತ್ತು. ಗದ್ದೆಯಲ್ಲಿರುವ ನೆರೆ ನೀರನ್ನು ಲೆಕ್ಕಿಸದ ಸಿಬ್ಬಂದಿ ಸ್ಥಳೀಯರೊಬ್ಬರ ಮಾರ್ಗದರ್ಶನದಿಂದ ನೀರಿಗೆ ಇಳಿದು ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries