HEALTH TIPS

ಧರ್ಮತ್ತಡ್ಕ ಪ್ರೌಢ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

             ಕುಂಬಳೆ: ಧರ್ಮತ್ತಡ್ಕ ಶಾಲಾ 2023-24 ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಶಾಲಾ ಸಭಾಂಗಣದಲ್ಲಿ ಜರಗಿತು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಾನ್ ಡಿಸೋಜ ಅಧ್ಯಕ್ಷತೆ ವಹಿಸಿದರು. ಮುಖ್ಯ ಶಿಕ್ಷಕ ಇ. ಎಚ್. ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಎನ್. ಶಂಕರನಾರಾಯಣ ಭಟ್, ಅಧ್ಯಾಪಕ ರಾಮಕೃಷ್ಣ ಭಟ್ ಶುಭಾಶಂಸನೆಗೈದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಪುಷ್ಪ ಕಮಲಾಕ್ಷ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕುಡಾಲ್ ಶುಭಾಶಂಸನೆಗೈದರು. ಕಾರ್ಯಕ್ರಮದಲ್ಲಿ ಅಧ್ಯಾಪಿಕೆ ಸುನಿತಾ ಕೆ. ಉಪಸ್ಥಿತರಿದ್ದರು. ಅಧ್ಯಾಪಿಕೆ ಶ್ವೇತಾ ಕುಮಾರಿ ಎಂ. ವರದಿ ವಾಚಿಸಿದರು.

            ರಕ್ಷಕ-ಶಿಕ್ಷಕ ಸಂಘದ ನೂತನ ಸಮಿತಿ ರಚಿಸಲಾಯಿತು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಶಾಲಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಹೆತ್ತವರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಯಿತು. 

            ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಸೌಮ್ಯ ಎಂ ಸ್ವಾಗತಿಸಿ, ಉಷಾಪದ್ಮ ಜಿ. ವಂದಿಸಿದರು. ಶಿವನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries