HEALTH TIPS

ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ

                ವದೆಹಲಿ: ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.

                ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಆರ್‌ಎಸ್‌ ಕಾಂಗ್ರೆಸ್‌ ಬಿಜೆಪಿಯನ್ನು ಬೆಂಬಲಿಸಲಿದೆ.

             ಈ ಮೂಲಕ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಲಿದೆ ಎಂದು ವೈಆರ್‌ಎಸ್‌ ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

               ಬಿಜೆಪಿ ಮಂಡಿಸುವ ಮಸೂದೆಗಳಿಗೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬೆಂಬಲ ನೀಡಲಿದೆ ಎಂದು ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭೆಯ ನಾಯಕ ವಿ. ವಿಜಯಸಾಯಿ ರೆಡ್ಡಿ ಹೇಳಿದ್ದಾರೆ.

                    ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ ಸೇರಿದಂತೆ ವಿವಿಧ ಮಸೂದೆಗಳಿಗೂ ವೈಆರ್‌ಎಸ್‌ ಕಾಂಗ್ರೆಸ್‌ ಬೆಂಬಲ ನೀಡಲಿದೆ.

              ಮುಖ್ಯವಾಗಿ ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಮಸೂದೆ ಮಂಡನೆಗೆ ಉಭಯ ಸದನಗಳಲ್ಲಿ ಯಾವುದೇ ಆತಂಕ ಎದುರಾಗುವುದಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವೈಆರ್‌ಎಸ್‌ ಕಾಂಗ್ರೆಸ್‌ ಲೋಕಸಭೆಯಲ್ಲಿ 22 ಹಾಗೂ ರಾಜ್ಯಸಭೆಯಲ್ಲಿ 9 ಸಂಸದರನ್ನು ಒಳಗೊಂಡಿದೆ. ವೈಆರ್‌ಎಸ್‌ ಕಾಂಗ್ರೆಸ್‌ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬೆಂಬಲ ನೀಡುವುದರಿಂದ            ಸದಸ್ಯರ ಬಲ 357 ಆಗಲಿದೆ.

                ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ 543. ಬಹುಮತಕ್ಕೆ 272 ಸದಸ್ಯರ ಬೆಂಬಲ ಬೇಕಿದೆ. 'ಇಂಡಿಯಾ'ದ ಸದಸ್ಯರ ಬಲ 154 ಇದೆ. ಉಳಿದಂತೆ ಬಿಜೆಡಿ 12, ಅಕಾಲಿದಳ 2 ಹಾಗೂ ಜೆಡಿಎಸ್‌ನ ಒಬ್ಬರು ಸದಸ್ಯ ಇದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries