ಕಾಸರಗೋಡು: ದುರಸ್ತಿಕೆಲಸಗಳ ಹಿನ್ನೆಲೆಯಲ್ಲಿ ನೀಲೇಶ್ವರಂ ಪಳ್ಳಿಕ್ಕೆರೆ ರೈಲ್ವೇ ಗೇಟ್ ಗುರುವಾರದಿಂದ ಮುಂದಿನ ಆದೇಶದ ವರೆಗೆ ಮುಚ್ಚುಗಡೆಗೊಳ್ಳಲಿರುವುದಾಗಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾಹನಗಳಿಗೆ ನೂತನವಾಗಿ ನಿರ್ಮಿಸಿರುವ ರೈಲ್ವೆ ಮೇಲ್ಸೇತುವೆ ಮೂಲಕ ಸಂಚರಿಸಲು ಅನುಮತಿ ನೀಡಿ ಆದೇಶಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೀಡಿರುವ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸುವ ಪತ್ರವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಳ್ಳಿಕ್ಕರ ರೈಲ್ವೇ ಗೇಟ್ ಮೂಲಕ ಹಾದುಹೋಗುವ ಎಲ್ಲಾ ವಾಹನಗಳು ಹೊಸದಾಗಿ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆ ಹಾದಿಯಾಗಿ ಸಂಚರಿಸಬೇಕಾಗಿದೆ. ಮುಂದಿನ ಸೂಚನೆ ವರೆಗೆ ಈ ವ್ಯವಸ್ಥೆ ಮುಂದುವರಿಯಲಿದೆ. ಈ ಸಂದರ್ಭ ಪೊಲೀಸರು ನೀಡುವ ನಿರ್ದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪ್ರಯಾಣಿಕರು, ವಾಹನ ಚಾಲಕರು ಮತ್ತು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಸಂಚಾರ ನಿಯಂತ್ರಣಕ್ಕೆ ಹೆಚ್ಚುವರಿ ಪೆÇಲೀಸರನ್ನು ನಿಯೋಜಿಸುವಂತೆ ಸಂಚಾರ ಪೆÇಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ ದಟ್ಟಣೆಯನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಪೊಲೀಸರು ನಿರ್ವಹಿಸಲಿದ್ದಾರೆ. ಸರಿಯಾದ ಮಾರ್ಗದರ್ಶನಕ್ಕಾಗಿ ಆಯಕಟ್ಟಿನ ಸ್ಥಳಗಳಲ್ಲಿ ಸೈನ್‍ಪೆÇೀಸ್ಟ್‍ಗಳು ಮತ್ತು ರಸ್ತೆತಡೆಗಳನ್ನು ಇರಿಸಲಾಗುತ್ತದೆ. ಶೀಘ್ರ ಕಾಮಗಾರಿ ಪಊರ್ತಿಗೊಳಿಸಿ ಸಂಚಾರ ಸುಗಮಗೊಳಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.




