HEALTH TIPS

ಮಣಿಪುರ: ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ; ಐದನೇ ಆರೋಪಿ ಬಂಧನ

             ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

             19 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

             ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

                   ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ-ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries