ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಜಮ್ಮು-ಕಾಶ್ಮೀರದಲ್ಲಿ ಭಾನುವಾರ ಭಾರಿ ಮಳೆಯಾಗಿದೆ.
0
samarasasudhi
ಜುಲೈ 09, 2023
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಜಮ್ಮು-ಕಾಶ್ಮೀರದಲ್ಲಿ ಭಾನುವಾರ ಭಾರಿ ಮಳೆಯಾಗಿದೆ.
ಕಾಶ್ಮೀರದಲ್ಲಿ ಮಳೆ ಸ್ವಲ್ಪ ಬಿಡುವು ನೀಡಿದ ಕಾರಣ, ಮೂರ ದಿನಗಳ ಬಳಿಕ ಅಮರನಾಥ ಯಾತ್ರೆ ಪುನರಾರಂಭವಾಗಿದೆ. ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 15.3 ಸೆಂ.ಮೀ.
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಸರ್ಕಾರಿ ನೌಕರರ ಭಾನುವಾರದ ರಜೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ರದ್ದು ಮಾಡಿ, ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಹರಿಯಾಣ, ಪಂಜಾಬ್‌ನಲ್ಲಿ ಭಾನುವಾರ ಬೆಳಗ್ಗೆಯಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಎರಡು ರಾಜ್ಯಗಳ ಹಲವು ಪ್ರದೇಶಗಳಲ್ಲಿ ಜನ ಜೀವನ ಆಸ್ತವ್ಯಸ್ತವಾಗಿದೆ.
ಹಿಮಾಚಲ ಪ್ರದೇಶ, ಹರಿಯಾಣದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.