HEALTH TIPS

ಕುಳೂರು ಶಾಲೆಯಲ್ಲಿ ಮೇಳೈಸಿದ 'ಆಟಿಡೊಂಜಿ ದಿನ'

                ಮಂಜೇಶ್ವರ : ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಪ್ರಾಶಸ್ತ್ಯವಿದೆ. ನಮ್ಮ ಪೂರ್ವಿಕರು ಮಳೆಗಾಲದ ಈ ಕಷ್ಟದ ಸಮಯವನ್ನು ಕಳೆಯಲು, ರೋಗ ರುಜಿನಾದಿಗಳಿಂದ ಪಾರಾಗಲು ತಮ್ಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ವಿಶೇಷವಾಗಿ ಕೊಂಡೊಯ್ಯುವ ತುಳುನಾಡಿನ ಸಂಸ್ಕøತಿಯು ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಕಾಲ ಬದಲಾದಂತೆ ಹಿಂದಿನ ಜೀವನ ಶೈಲಿ, ಆಹಾರ ಕ್ರಮಗಳೂ ಬದಲಾದವು. ಅವುಗಳನ್ನು ಈಗಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


         ಕಾರ್ಯಕ್ರಮದಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷÀ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಕುಳೂರು ಅವರು ತುಳುನಾಡಿನ ಸಂಸ್ಕೃತಿ, ಆಟಿ ತಿಂಗಳ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷÀ ಮೊಹಮ್ಮದ್ ಹಾಜಿ ಕಂಚಿಲ, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕಾರ್ಯಕ್ರಮ ಸಮಿತಿ ಅಧ್ಯಕ್ಷ ಹರಿರಾಮ ಕುಳೂರು, ಮಹಿಳಾ ಸಮಿತಿಯ ಅಧ್ಯಕ್ಷೆ ಚಂದ್ರಾವತಿ ವಿ.ಪಿ. ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರಾ ಕಲ್ಕಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ, ದೈವ ನರ್ತಕರೂ ಆಗಿರುವ ಲೋಕೇಶ್ ಅವರು ಆಟಿ ತಿಂಗಳಲ್ಲಿ ಮನೆ ಮನೆಗಳಿಗೆ ಬರುವ ಆಟಿ ಕಳಂಜನ ಕುರಿತಾದ ಹಾಡು ಹಾಗೂ ಅದರ ಐತಿಹ್ಯದ ಕುರಿತಾಗಿ ಮಾಹಿತಿ ನೀಡುವುದರೊಂದಿಗೆ ತಮ್ಮ ತಂಡದೊಂದಿಗೆ ‘ಆಟಿ ಕಳಂಜ’ ನರ್ತನ ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಹೊಸ ಕಳೆ ಮೂಡಿಸಿದರು. 


         ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ ಪಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಶಿಕ್ಷಕಿ ಶ್ವೇತ ಇ. ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.

        ಬಳಿಕ ತುಳುನಾಡಿನ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಒಳಗೊಂಡ ಆಟಿ ತಿಂಗಳ ವಿಶೇಷ ಊಟವನ್ನು ಸವಿಯಲಾಯಿತು. ನಂತರ ಶಾಲಾ ಮಕ್ಕಳಿಗೆ ಹಾಗೂ ಹೆತ್ತವರಿಗೆ ಗ್ರಾಮೀಣ ಆಟಗಳನ್ನು ಆಡಿಸುವ ಮೂಲಕ ಗ್ರಾಮೀಣ ಆಟಗಳ ಪ್ರದರ್ಶನ ನಡೆಸಲಾಯಿತು. ಜೊತೆಗೆ ಜನಪದ ಗೀತೆಗಳ ಗಾಯನವು ಕಾರ್ಯಕ್ರಮಕ್ಕೆ ಮತ್ತಷ್ಟು ರಂಗನ್ನು ತಂದಿತು.


         ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries