ನವದೆಹಲಿ (PTI): ಈ ವರ್ಷ ಜನವರಿಯಿಂದ ಜೂನ್ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಿರುವ ವಿದೇಶಿ ಪ್ರವಾಸಿಗರ ಸಂಖ್ಯೆಯು 2022ರಲ್ಲಿ ಇದೇ ಅವಧಿಯಲ್ಲಿ ಭಾರತಕ್ಕೆ ಬಂದ ಪ್ರವಾಸಿಗರ ಸಂಖ್ಯೆಗಿಂತ ಶೇ 106ರಷ್ಟು ಹೆಚ್ಚಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
0
samarasasudhi
ಆಗಸ್ಟ್ 31, 2023
ನವದೆಹಲಿ (PTI): ಈ ವರ್ಷ ಜನವರಿಯಿಂದ ಜೂನ್ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಿರುವ ವಿದೇಶಿ ಪ್ರವಾಸಿಗರ ಸಂಖ್ಯೆಯು 2022ರಲ್ಲಿ ಇದೇ ಅವಧಿಯಲ್ಲಿ ಭಾರತಕ್ಕೆ ಬಂದ ಪ್ರವಾಸಿಗರ ಸಂಖ್ಯೆಗಿಂತ ಶೇ 106ರಷ್ಟು ಹೆಚ್ಚಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಳೆದ ವರ್ಷ ಜನವರಿಯಿಂದ- ಜೂನ್ ಅವಧಿಗೆ ಹೋಲಿಸಿದರೆ ಈ ವರ್ಷ ಇದೇ ಅವಧಿಯಲ್ಲಿ ವಿದೇಶಿ ವಿನಿಮಯ ಗಳಿಕೆಯಲ್ಲಿಯೂ ಬೆಳವಣಿಗೆ ಕಂಡುಬಂದಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ.
ಕೋವಿಡ್-19 ಸಾಂಕ್ರಾಮಿಕದ ಪರಿಣಾಮದಿಂದ ಸೊರಗಿದ್ದ ದೇಶದ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ದೇಶ, ವಿದೇಶಗಳ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವಂತೆ ಮಾಡಲು ಭಾರತವು ಹಲವು ಸುಸ್ಥಿರ ಪ್ರಯತ್ನಗಳನ್ನು ನಡೆಸಿತ್ತು. ಈ ವರ್ಷ ಜನವರಿಯಿಂದ ಜೂನ್‌ವರೆಗೆ 43.80 ಲಕ್ಷ ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದಾರೆ. ಇದೇ ಅವಧಿಯಲ್ಲಿ ಕಳೆದ ವರ್ಷ 21.24 ಲಕ್ಷ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ್ದರು.
2021ರಲ್ಲಿ 67.7 ಕೋಟಿ ಭಾರತೀಯರು ದೇಶದಲ್ಲಿನ ವಿವಿಧ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. 2022ಕ್ಕೆ ಈ ಸಂಖ್ಯೆಯು 173 ಕೋಟಿಗೆ ತಲುಪಿದೆ ಎಂದು ಮೂಲಗಳು ಹೇಳಿವೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಕಾಶಿ ವಿಶ್ವನಾಥ ಕಾರಿಡಾರ್ ಕೂಡಾ ಅಲ್ಲಿಯ ಪ್ರವಾಸೋಧ್ಯಮದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದೆ ಎನ್ನಲಾಗಿದೆ.