HEALTH TIPS

ಮಣಿಪುರ: ಇಂಫಾಲ್ ಪಶ್ಚಿಮ ಭಾಗದಲ್ಲಿ ಹೊಸದಾಗಿ ಹಿಂಸಾಚಾರ ಆರಂಭ-15 ಮನೆಗಳಿಗೆ ಬೆಂಕಿ

             ಇಂಫಾಲ್: ಮಣಿಪುರದ ಇಂಫಾಲ್ ಪಶ್ಚಿಮ ಭಾಗದಲ್ಲಿ ಹೊಸದಾಗಿ ಹಿಂಸಾಚಾರ ಆರಂಭವಾಗಿದೆ. ಭಾನುವಾರ 15 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

              ಶನಿವಾರ ಸಂಜೆ ಲಾಂಗೋಲ್ ಗೇಮ್ಸ್ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಗುಂಪು ಘರ್ಷಣೆ ನಡೆದಿದ್ದರಿಂದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.

            ಈ ಹಿಂಸಾಚಾರದ ವೇಳೆ 45 ವರ್ಷದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಅವರನ್ನು ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (RIMS) ದಾಖಲಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಭಾನುವಾರ ಬೆಳಿಗ್ಗೆ ಪರಿಸ್ಥಿತಿ ಸುಧಾರಿಸಿದರೂ ನಿರ್ಬಂಧಗಳು ಮುಂದುವರೆದಿವೆ. ಇಂಫಾಲ್ ಪೂರ್ವ ಜಿಲ್ಲೆಯ ಚೆಕನ್ ಪ್ರದೇಶದಲ್ಲೂ ಹಿಂಸಾಚಾರ ನಡೆದಿರುವುದು ವರದಿಯಾಗಿದೆ. ಅಲ್ಲಿ ಶನಿವಾರ ಸಂಜೆ ದೊಡ್ಡ ವಾಣಿಜ್ಯ ಸಂಸ್ಥೆಯ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ. ಅಕ್ಕಪಕ್ಕದ ಮೂರು ಮನೆಗಳಿಗೂ ಬೆಂಕಿ ಹಚ್ಚಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮಣಿಪುರ ವಿಧಾನಸಭಾ ಕ್ಷೇತ್ರಗಳ ಸಮನ್ವಯ ಸಮಿತಿ ಕರೆ ನೀಡಿದ್ದ ಬಂದ್ ನಡುವೆಯೂ ಈ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಇಂಫಾಲ್‌ನಲ್ಲಿ ಸಾಮಾನ್ಯ ಜನ ಜೀವನ ಸ್ಥಗಿತಗೊಂಡಿತ್ತು. ಮೇ ತಿಂಗಳಲ್ಲಿ ಆರಂಭವಾಗಿರುವ ಮಣಿಪುರ ಹಿಂಸಾಚಾರದಲ್ಲಿ ಇದುವರೆಗೆ 160 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries