ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ಕನ್ನಡ ಅಧ್ಯಯನಕ್ಕೆ ವಿಶೇಷ ಅವಕಾಶವು ಲಭ್ಯವಾಗಿದ್ದು, 2023-24ನೇ ಸಲಿನ ಎಂ.ಎ ಸ್ನಾತಕೋತ್ತರ ಶಿಕ್ಷಣ ವಿಭಾಗಕ್ಕೆ ದಾಖಲಾತಿಯು ಆರಂಭಗೊಂಡಿರುತ್ತದೆ.ಆಸಕ್ತ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಎಂಎ ಶಿಕ್ಷಣ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ(8970162207 ಅಥವಾ 9731325093)ಸಂಪರ್ಕಿಸಬಹುದಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕೊಡಮಾಡುವ ವಿದ್ಯಾರ್ಥಿ ವೇತನ ಮತ್ತು ಇತರ ವಿದ್ಯಾರ್ಥಿ ವೇತನಗಳು ಕೂಡ ಲಭ್ಯವಿರಲಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.





