ನವದೆಹಲಿ : ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
0
samarasasudhi
ಆಗಸ್ಟ್ 31, 2023
ನವದೆಹಲಿ : ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಷಿ ಜಿನ್‌ಪಿಂಗ್ ಭಾಗವಹಿಸುವಕೆಗೆ ಸಂಬಂಧಿಸಿ ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಶೃಂಗಸಭೆ ಸಂದರ್ಭದಲ್ಲಿಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಜಿನ್‌ಪಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಆದರೆ, ಜಿನ್‌ಪಿಂಗ್ ಅವರು ಶೃಂಗದಲ್ಲಿ ಭಾಗಿಯಾಗುವುದನ್ನು ಖಚಿತಪಡಿಸುವ ಯಾವುದೆ ಮಾಹಿತಿ ಇಲ್ಲ ಎಂದು ಮೂಲಗಳು ಹೇಳಿವೆ.
ಪ್ರಧಾನಿ ಮೋದಿ ಅವರಿಗೆ ಸೋಮವಾರ ಕರೆ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಸಭೆಯಲ್ಲಿ ತಾವು ಪಾಲ್ಗೊಳ್ಳದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಕೂಡ ಪಾಲ್ಗೊಳ್ಳುತ್ತಿಲ್ಲ.