HEALTH TIPS

ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ 'ಶಿವಶಕ್ತಿ', ಚಂದ್ರಯಾನ-3 ಯಶಸ್ವಿಯಾದ ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ

         ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

      ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

     ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.


          ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

           ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು. 

        ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries