ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೆಹಲಿಯಲ್ಲಿ ವಿಡಿಯೊ ಕಾನ್ಪರೆನ್ಸ್ ಮೂಲಕ ಏಕಕಾಲಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
0
samarasasudhi
ಆಗಸ್ಟ್ 06, 2023
ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೆಹಲಿಯಲ್ಲಿ ವಿಡಿಯೊ ಕಾನ್ಪರೆನ್ಸ್ ಮೂಲಕ ಏಕಕಾಲಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಅಮೃತ ಭಾರತ್ ನಿಲ್ದಾಣ ಅಭಿವೃದ್ಧಿ ಯೋಜನೆಯ ಮೊದಲ ಭಾಗದಲ್ಲಿ ಈ ಎಲ್ಲ 508 ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ.
ಈ ವೇಳೆ ಮಾತನಾಡಿರುವ ಪ್ರಧಾನಿ ಮೋದಿ ಅವರು, ಈ ಯೋಜನೆಯಲ್ಲಿ ನವೀಕರಣಗೊಳ್ಳುವ ರೈಲು ನಿಲ್ದಾಣಗಳು ಆಯಾ ನಗರದ ಪರಂಪರೆ ಜೊತೆ ದೇಶದ ಉನ್ನತ ಐತಿಹಾಸಿಕ ಪರಂಪರೆಯನ್ನು ಎತ್ತಿ ಹಿಡಿಯಲಿವೆ ಎಂದು ಹೇಳಿದರು.
ಇದು ದೀರ್ಘಕಾಲದ ಯೋಜನೆಯಾಗಿದ್ದು, ಇದಕ್ಕಾಗಿ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಇದೊಂದು ಮೈಲಿಗಲ್ಲು ಎಂದು ಹೇಳಿದರು. ಈ ವೇಳೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಇದ್ದರು.