HEALTH TIPS

ಸೆ. 7 ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಭಾರತಕ್ಕೆ

                ವಾಷಿಂಗ್ಟನ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸೆ. 7ರಿಂದ 10ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ವೇತಭವನವು ಮಂಗಳವಾರ ತಿಳಿಸಿದೆ.

                 ಶೃಂಗಸಭೆಯಲ್ಲಿ ಬೈಡನ್ ಅವರು ಜಿ-20 ಪಾಲುದಾರ ರಾಷ್ಟ್ರಗಳ ನಾಯಕರೊಂದಿಗೆ ಜಾಗತಿಕ ಸಮಸ್ಯೆಗಳನ್ನು ನಿಭಾಯಿಸುವ ಕುರಿತು ಜಂಟಿ ಪ್ರಯತ್ನಗಳು, ಹವಾಮಾನ ಬದಲಾವಣೆ, ಶುದ್ಧ ಇಂಧನ ಪರಿವರ್ತನೆ, ಉಕ್ರೇನ್ ಸಂಘರ್ಷದಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವಿಕೆಯ ಕುರಿತು ಚರ್ಚಿಸಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೆರಿನ್ ಜೀನ್-ಪಿಯರ್ ಅವರು ತಿಳಿಸಿದ್ದಾರೆ.

               ಜಾಗತಿಕ ಸವಾಲುಗಳನ್ನು ಎದುರಿಸುವುದು ಸೇರಿದಂತೆ ಬಡತನದ ವಿರುದ್ಧ ಹೋರಾಡಲು ವಿಶ್ವಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

                     ರಜೆ (ನವದೆಹಲಿ ವರದಿ): ಜಿ-20 ಶೃಂಗಸಭೆಯ ಕಾರಣ, ಸೆ. 8ರಿಂದ 10ರವರೆಗೆ ದೆಹಲಿಯ ಎಲ್ಲ ಖಾಸಗಿ ಮತ್ತು ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಮಾರುಕಟ್ಟೆಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries