HEALTH TIPS

9423 ತೀರ್ಪುಗಳ ಭಾಷಾಂತರ; PM ಮೋದಿ ಪ್ರಶಂಸೆಗೆ ಕೈಮುಗಿದ ಮುಖ್ಯ ನ್ಯಾಯಮೂರ್ತಿ

              ವದೆಹಲಿ: ನ್ಯಾಯಾಲಯದ ಆದೇಶಗಳನ್ನು ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಿಸಿದ ನ್ಯಾಯಾಂಗ ವ್ಯವಸ್ಥೆಯನ್ನು ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ.

                 77ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಲ್ಲಿನ ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಈವರೆಗೂ ಪ್ರಕಟಗೊಂಡ ತೀರ್ಪುಗಳು ಈಗ ಅವರವರ ಮಾತೃಭಾಷೆಯಲ್ಲೇ ಲಭ್ಯವಾಗುವಂತೆ ಮಾಡಿದ ಸುಪ್ರೀಂ ಕೋರ್ಟ್‌ನ ಪರಿಶ್ರಮ ಅನನ್ಯ.

                  9,423 ತೀರ್ಪುಗಳು ಈಗ ಪ್ರಾದೇಶಿಕ ಭಾಷೆಗಳಲ್ಲಿ ಲಭಿಸುವಂತೆ ಸುಪ್ರೀಂ ಕೋರ್ಟ್‌ ಕ್ರಮ ಕೈಗೊಂಡಿದೆ' ಎಂದರು.

                   ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪ್ರಧಾನಿ ಮೋದಿ ಅವರ ಮಾತಿಗೆ ಕೈಮುಗಿದು ಧನ್ಯವಾದ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

                 ಸುಪ್ರೀಂ ಕೋರ್ಟ್‌ ತನ್ನ ತೀರ್ಪುಗಳನ್ನು ವಿವಿಧ ಭಾಷೆಗಳಿಗೆ ಭಾಷಾಂತರಿಸಿ ಈ ವರ್ಷದ ಆರಂಭದಲ್ಲಿ ಗಣರಾಜ್ಯೋತ್ಸವ ದಿನದಂದು ತನ್ನ ಅಂತರ್ಜಾಲ ತಾಣಕ್ಕೆ ಅಪ್‌ಲೋಡ್ ಮಾಡಿತು. ಇದರಲ್ಲಿ 8,977 ತೀರ್ಪುಗಳು ಹಿಂದಿಯಲ್ಲಿವೆ. 

                    'ಸುಪ್ರೀಂ ಕೋರ್ಟ್‌ನ 35 ಸಾವಿರ ಪ್ರಮುಖ ತೀರ್ಪುಗಳು ದೇಶದ ಪ್ರಮುಖ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡುವುದು ನಮ್ಮ ಉದ್ದೇಶ. ಆ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಯತ್ನ ಸುಪ್ರೀಂ ಕೋರ್ಟ್‌ನದ್ದಾಗಿದೆ' ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries