ನವದೆಹಲಿ: ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದಿಂದ ಮಾತ್ರವೇ ಉಕ್ರೇನ್ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಲು ಸಾಧ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹೇಳಿದ್ದಾರೆ.
0
samarasasudhi
ಆಗಸ್ಟ್ 07, 2023
ನವದೆಹಲಿ: ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದಿಂದ ಮಾತ್ರವೇ ಉಕ್ರೇನ್ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಲು ಸಾಧ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹೇಳಿದ್ದಾರೆ.
ಉಕ್ರೇನ್ ಬಿಕ್ಕಟ್ಟು ಕುರಿತು ಚರ್ಚಿಸಲು ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯುತ್ತಿಯುವ ಎರಡು ದಿನಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
'ಎಲ್ಲ ರಾಷ್ಟ್ರಗಳ ಸಾರ್ವಭೌಮತೆಯನ್ನು ಗೌರವಿಸಬೇಕು. ಈ ವಿಷಯದಲ್ಲಿ ಯಾವುದೇ ದೇಶಕ್ಕೂ ಯಾವುದೇ ವಿನಾಯಿತಿ ಇರಕೂಡದು' ಎಂದು ಧೋವಲ್ ಪ್ರತಿಪಾದಿಸಿದರು.
ಅಮೆರಿಕದ ಭದ್ರತಾ ಸಲಹೆಗಾರ ಜೇಕ್ ಸಲ್ಲೀವನ್, ಚೀನಾದ ವಿಶೇಷ ರಾಯಭಾರಿ (ಯುರೋಪ್-ಏಷ್ಯಾ ವಿಭಾಗ) ಲಿ ಹುಯಿ ಸೇರಿದಂತೆ 40 ದೇಶಗಳ ಭದ್ರತೆ ಅಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಆಹ್ವಾನ ನೀಡಿಲ್ಲ.