ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದೆ.
0
samarasasudhi
ಆಗಸ್ಟ್ 07, 2023
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು.