ಮಂಜೇಶ್ವರ: ಕೊಡ್ಲಮೋಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ಶಾಲಾ ವ್ಯವಸ್ಥಾಪಕ ಶಂಕರ ಮೋಹನ ಪೂಂಜಾ ಧ್ವಜಾರೋಹಣಗೈದು ಶುಭಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷÀ ಗೋಪಾಲಕೃಷ್ಣ ಪಜ್ವ ಸ್ವಾತಂತ್ರ ದಿನದ ಬಗ್ಗೆ ಮಾತನಾಡಿದರು. ವೃತ್ತಿಯಿಂದ ನಿವೃತ್ತಿ ಹೊಂದಿದ ಶಾಲಾ ಪ್ರಾಂಶುಪಾಲ ಚಂದ್ರಕುಮಾರ್ ಮತ್ತು ಮುಖ್ಯೋಪಾಧ್ಯಾಯಿನಿ ಭಾರತಿ ಹಾಗೂ ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಜಮಾಲುದ್ದೀನ್ ಅವÀರನ್ನು ಪಿಟಿಎ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಷ್ಣವೇಣಿ ಸನ್ಮಾನಿತರನ್ನು ಅಭಿನಂದಿಸಿದರು. ಹೈಯರ್ ಸೆಕೆಂಡರಿ ಪ್ರಾಂಶುಪಾಲ ವಿಜಯ್ ಕುಮಾರ್ ಸ್ವಾಗತಿಸಿ, ಕುಮಾರಿ ದೀಕ್ಷಾ ವಂದಿಸಿದರು. ಸ್ಮಿತಾ ನಿರೂಪಿಸಿದರು.

.jpg)
