ಬದಿಯಡ್ಕ: ನೀರ್ಚಾಲು ಶ್ರೀವಿಘ್ನೇಶ್ವರ ಯಕ್ಷಗಾನ ಕಲಾಸಂಘದ ಆಶ್ರಯದಲ್ಲಿ ಅಗ್ರಮಾನ್ಯ ಕಲಾವಿದರ ಕೂಡುವಿಕೆಯೊಂದಿಗೆ ಇಂದು(ಆ.20) ಅಪರಾಹ್ನ 2 ರಿಂದ ನೀರ್ಚಾಲು ಶಾಲಾ ವಠಾರದಲ್ಲಿ ಶ್ರೀರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಸಮಾರಂಭವನ್ನು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ದೀಪ ಬೆಳಗಿಸಿ ಉದಾಟಿಸುವರು. ಬಳಿಕ ನಡೆಯುವ ತಾಳಮದ್ದಳೆಯ ಹಿಮ್ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ತಲ್ಪನಾಜೆ ವೆಂಕಟರಮಣ ಭಟ್(ಭಾಗವತಿಕೆ), ಲವಕುಮಾರ ಐಲ, ಲಕ್ಷ್ಮೀಶ ಬೇಂಗ್ರೋಡಿ(ಚೆಂಡೆ-ಮದ್ದಳೆ)ಯಲ್ಲಿ ಮುನ್ನಡೆಸುವರು. ಮುಮ್ಮೇಳದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್, ಉಜಿರೆ ಅಶೋಕ್ ಭಟ್, ರಾಧಾಕೃಷ್ಣ ಕಲ್ಚಾರ್, ಗಣೇಶ ಶೆಟ್ಟಿ ಕನ್ನಡಿಕಟ್ಟೆ, ಬಾಲಕೃಷ್ಣ ಆಚಾರ್ಯ ನೀರ್ಚಾಲು ಪಾತ್ರನಿರ್ವಹಣೆ ಮಾಡುವರು.


