ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.
0
samarasasudhi
ಆಗಸ್ಟ್ 16, 2023
ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.
ನನಗೆ ಕಣ್ಣಿನ ಸಮಸ್ಯೆ ಇತ್ತು ಹಾಗೂ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಬೇಕಾಗಿತ್ತು. ಸಮಯದ ಅಭಾವ ಹಾಗೂ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ಹೋಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಕಾರಣಗಳಿಂದಾಗಿ ನಾನು ಕೆಂಪು ಕೋಟೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.