ಪೆರ್ಲ: ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸೆ. 6ರಂದು ಬೆಳಗ್ಗೆ 10ರಿಂದ ದೇವಸ್ಥಾನ ವಠಾರದಲ್ಲಿ ಜರುಗಲಿದೆ. ಶ್ರೀ ಶಾಸ್ತಾರ ಸುಬ್ರಹ್ಮಣ್ಯೇಶ್ವರ ಸೇವಾ ಟ್ರಸ್ಟ್, ಚೇರ್ಕಬೆ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ವತಿಯಿಂದ ಕಾರ್ಯಕ್ರಮ ಜರುಗಲಿದೆ. ಮಕ್ಕಳಿಗಾಗಿ ಶ್ರೀಕೃಷ್ಣ ವೇಷ ಸ್ಪರ್ಧೆ, ಮಹಿಳೆಯರು, ಪುರುಷರಿಗೆ ಹಾಗೂ ರ್ಸಾಜನಿಕ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆಗಳು ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.




