ನವದೆಹಲಿ: ದೇಶದ ಜೈಲುಗಳಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು, ಕೈದಿಗಳಿಗೆ ವೃತ್ತಿ ತರಬೇತಿ ನೀಡುವ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
0
samarasasudhi
ಆಗಸ್ಟ್ 31, 2023
ನವದೆಹಲಿ: ದೇಶದ ಜೈಲುಗಳಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು, ಕೈದಿಗಳಿಗೆ ವೃತ್ತಿ ತರಬೇತಿ ನೀಡುವ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ವರ್ಚುವಲ್ ವಿಧಾನದ ಮೂಲಕ ವಿಚಾರಣೆ ನಡೆಸಲು, ಕೈದಿಗಳನ್ನು ಭೇಟಿಯಾಗ ಬಯಸುವ ಅವರ ಕುಟುಂಬ ಸದಸ್ಯರಿಗೆ ಅನುಕೂಲ ಕಲ್ಪಿಸಲು ಜೈಲುಗಳಲ್ಲಿ ಐಟಿ ಮೂಲಸೌಕರ್ಯಗಳು ಅಗತ್ಯ.
ಜೈಲುಗಳ ಸ್ಥಿತಿ ಕುರಿತು 2013ರಲ್ಲಿ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ರಚಿಸಿದ್ದ ಸಮಿತಿ ಸಲ್ಲಿಸಿದ್ದ ವರದಿಯನ್ನು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ರಾಜೇಶ್ ಬಿಂದಲ್ ಅವರಿದ್ದ ನ್ಯಾಯಪೀಠ ಪರಿಶೀಲಿಸಿದ್ದು, ಈ ಸಂಬಂಧ ಆಗಸ್ಟ್ 29ರಂದು ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಜೈಲುಗಳ ಮಹಾ ನಿರ್ದೇಶಕರು ನೀಡಿದ ಮಾಹಿತಿ ಕ್ರೋಡೀಕರಿಸುವಂತೆ, ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಗೌರವ್ ಅಗ್ರವಾಲ್ ಅವರಿಗೆ ಸೂಚಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಮೂವರು ಸದಸ್ಯರಿರುವ 'ಜೈಲುಗಳ ಸುಧಾರಣೆ ಕುರಿತ ಸಮಿತಿ'ಯನ್ನು ಸುಪ್ರೀಂಕೋರ್ಟ್ ರಚಿಸಿದ್ದು, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಮಿತವ್ ರಾಯ್ ಸಮಿತಿ ಮುಖ್ಯಸ್ಥರಾಗಿದ್ದಾರೆ.
ಸಮಿತಿಯು ಕಳೆದ ವರ್ಷ ಡಿಸೆಂಬರ್ 27ರಂದು ಸಮಿತಿ ಸಲ್ಲಿಸಿದ್ದ ಎಂಟನೇ ವರದಿಯನ್ನು ನ್ಯಾಯಪೀಠ ಪರಿಶೀಲಿಸಿದೆ.