ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸುಪ್ರಿಂಕೋರ್ಟ್‌ನಲ್ಲಿ ಗುರುವಾರವೂ ನಡೆಯಿತು.
0
samarasasudhi
ಆಗಸ್ಟ್ 11, 2023
ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸುಪ್ರಿಂಕೋರ್ಟ್‌ನಲ್ಲಿ ಗುರುವಾರವೂ ನಡೆಯಿತು.
'370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲು ಸಾಧ್ಯವೇ ಇಲ್ಲ ಎಂದು ಹೇಳುವುದು ಕಷ್ಟ' ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರಿರುವ ನ್ಯಾಯಪೀಠ ಹೇಳಿತು.
'ಭಾರತ ಒಕ್ಕೂಟಕ್ಕೆ ಜಮ್ಮು-ಕಾಶ್ಮೀರದ ಸಾರ್ವಭೌಮತೆಯನ್ನು ಸಂಪೂರ್ಣವಾಗಿ ಒಪ್ಪಿಸಿರುವುದು ಸ್ಪಷ್ಟ. ಸಂವಿಧಾನದಲ್ಲಿ ಹೇಳಿರುವಂತೆ ಕೇಂದ್ರ ಮತ್ತು ರಾಜ್ಯಗಳಿರುವ ಸಮಾನ ಅಧಿಕಾರಕ್ಕೆ ಸಂಬಂಧಿಸಿ ಭಿನ್ನಾಭಿಪ್ರಾಯಗಳಿದ್ದರೂ ಒಕ್ಕೂಟದ ಸಾರ್ವಭೌಮತೆಗೆ ಇವುಗಳಿಂದ ಧಕ್ಕೆಯಾಗಿಲ್ಲ' ಎಂದೂ ನ್ಯಾಯಪೀಠ ಹೇಳಿತು.
'ಜಮ್ಮು-ಕಾಶ್ಮೀರದ ಸಾರ್ವಭೌಮತ್ವವನ್ನು ಯಾವುದೇ ಷರತ್ತುಗಳಿಲ್ಲದೇ ಬಿಟ್ಟುಕೊಡಲಾಗಿದೆ' ಎಂದು ಅರ್ಜಿದಾರರೊಬ್ಬರ ಪರ ವಕೀಲ ಜಾಫರ್ ಶಾ ಅವರ ವಾದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿತು.