HEALTH TIPS

ಥ್ರೆಡ್ಸ್ ಅಪ್ಲಿಕೇಶನ್‌ನ ವೆಬ್ ಆವೃತ್ತಿ ಮುಂದಿನ ವಾರ ಆರಂಭ: ವರದಿ

                ಫೇಸ್‌ಬುಕ್ ಒಡೆತನದ ಮೆಟಾ ಕಂಪನಿಯು ತನ್ನ ಮೈಕ್ರೋ ಬ್ಲಾಗಿಂಗ್ ವೇದಿಕೆ 'ಥ್ರೆಡ್ಸ್' ಅಪ್ಲಿಕೇಶನ್‌ನ ವೆಬ್ ಆವೃತ್ತಿಯನ್ನು ಮುಂದಿನ ವಾರ ಆರಂಭಿಸಲಿದೆ. ಬಲ್ಲ ಮೂಲಗಳು ಈ ಮಾಹಿತಿ ನೀಡಿರುವುದಾಗಿ 'ವಾಲ್ ಸ್ಟ್ರೀಟ್ ಜರ್ನಲ್' ಭಾನುವಾರ ವರದಿ ಮಾಡಿದೆ.

                ಥ್ರೆಡ್ಸ್‌ನ ವೆಬ್‌ ಆವೃತ್ತಿಯ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಥ್ರೆಡ್ಸ್‌ ಮತ್ತು ಇನ್‌ಸ್ಟಾಗ್ರಾಂ ಸಿಇಒ ಆಯಡಂ ಮೊಸ್ಸೆರಿ ಕಳೆದ ವಾರ ಹೇಳಿದ್ದರು.

               ಮೈಕ್ರೊಬ್ಲಾಗಿಂಗ್ ವೇದಿಕೆ ಟ್ವಿಟರ್‌ಗೆ ಪರ್ಯಾಯ ಎಂಬಂತೆ ಬಿಂಬಿತವಾಗಿರುವ ಥ್ರೆಡ್ಸ್ ಆಯಪ್‌ ಜುಲೈನಲ್ಲಿ ಬಿಡುಗಡೆಯಾಗಿತ್ತು. ಇದರ ಬೆನ್ನಲ್ಲೇ ಮೆಟಾ ಮಾಲೀಕ ಮಾರ್ಕ್ ಜುಕರ್‌ಬರ್ಗ್ ಮತ್ತು ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಾಕ್ಸಮರ ನಡೆಸಿದ್ದರು.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries