HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ರಾಮಾಯಣ ಮಾಸಾಚರಣೆ

            ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶನಿವಾರ ರಾಮಾಯಣ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ದೀಪಬೆಳಗಿಸಿ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಗುರುವಂದನೆ, ರಾಮತಾರಕ ಮಂತ್ರ ಜಪ, ರಾಮರಕ್ಷಾಸ್ತೋತ್ರ ಪಠಣ, ಭಜನೆ ನಡೆಯಿತು. ನಂತರ ರಾಮಾಯಣಕ್ಕೆ ಸಂಬಂಧಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. 


         ಕುಂಬಳೆ ಸೀಮೆಯ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪರ್ಯಟನೆಯ ಮೂಲಕ ರಾಮಾಯಣ ಮಾಸಾಚರಣೆಯನ್ನು ಅರ್ಥವತ್ತಾಗಿ ಪ್ರವಚನಗೈಯುತ್ತಿರುವ ಕೀರ್ತನ ಪ್ರವೀಣ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅವರು ಕಥಾಪ್ರವಚನವನ್ನು ನಡೆಸಿಕೊಟ್ಟರು. ಆಡಳಿತ ಮಂಡಳಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೇಮಾರ್ಗ, ಚಿತ್ರಕಲಾ ಅಧ್ಯಾಪಕ ಶಿವಾನಂದ ಆಚಾರ್ಯ, ಅಧ್ಯಾಪಕ ವೃಂದ, ರಕ್ಷಕರು ಪಾಲ್ಗೊಂಡಿದ್ದರು. ಅಧ್ಯಾಪಕ ಹರಿಪ್ರಸಾದ ಸ್ವಾಗತಿಸಿ, ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries