ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರು ಮತ್ತು ಸೇನಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಆಗಸ್ಟ್ 05, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರು ಮತ್ತು ಸೇನಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದರು.
'ಕುಲ್ಗಾಮ್‌ನ ಹಾಲನ್ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಟ್ವೀಟ್ ಮಾಡಿದೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.