ಮಂಜೇಶ್ವರ: ಕೇರಳ ಕೃಷಿ ವಿಶ್ವವಿದ್ಯಾಲಯದ ಮಂಜೇಶ್ವರ ವಿಸ್ತರಣಾ ತರಬೇತಿ ಕೇಂದ್ರವು ವರ್ಕಾಡಿಯಲ್ಲಿ ಒಂದು ದಿನದ ತರಬೇತಿಯನ್ನು ಆಯೋಜಿಸಿತ್ತು. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು. ಮಂಜೇಶ್ವರದಲ್ಲಿರುವ ವಿಸ್ತರಣಾ ತರಬೇತಿ ಕೇಂದ್ರವನ್ನು ಜಿಲ್ಲೆಯ ಕೃಷಿ ಅಭಿವೃದ್ಧಿಗೆ ಹೆಚ್ಚು ಬಳಸಿಕೊಳ್ಳಲಾಗುವುದು ಹಾಗೂ ಜಿಲ್ಲಾ ಪಂಚಾಯಿತಿಯ ತರಬೇತಿ ಕಾರ್ಯಕ್ರಮಗಳಿಗೆ ಕೇಂದ್ರವನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಈ ಸಂದರ್ಭ ತಿಳಿಸಿದರು.
ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ. ಆರ್.ಜಯಾನಂದ ಪ್ರಧಾನ ಭಾಷಣ ಮಾಡಿದರು. ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಭಾರತಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ. ಬಾರಿಕ್ಕಾಡ್ ರಮೇಶ ತರಗತಿ ನಡೆಸಿದರು. ತರಬೇತಿಯಲ್ಲಿ ಸುಮಾರು 50 ಮಂದಿ ಭಾಗವಹಿಸಿದ್ದರು. ಸಂಸ್ಥೆಯಲ್ಲಿ ಸಿದ್ಧಪಡಿಸಿರುವ ದ್ರಾಕ್ಷಿ ತೋಟ ಹಾಗೂ ತೆಂಗಿನ ತೋಟವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಹಾಗೂ ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ ಉದ್ಘಾಟಿಸಿದರು. ಸಂಸ್ಥೆಯ ಮುಖ್ಯಸ್ಥ ಡಾ. ಬಾರಿಕಾಡ್ ರಮೇಶ ಸ್ವಾಗತಿಸಿ, ವಂದಿಸಿದರು.

.jpg)
