ಕಾಸರಗೋಡು: ದಕ್ಷಿಣ ಭಾರತದ ಖ್ಯಾತ ಮೃದಂಗ ವಿದ್ವಾನ್, ಶತಾಯುಷಿ ಬಾಬು ರೈ ಜನ್ಮ ಶತಮಾನೋತ್ಸವ ಸಮಾರಂಭ ಆ. 15ರಂದು ಎಡನೀರು ಮಠದಲ್ಲಿ ಜರುಗಲಿದೆ.
ಮೈಸೂರು ಆಸ್ಥಾನ ವಿದ್ವಾಂಸರಾಗಿ ತಮ್ಮ ಅದ್ಭುತ ಕೈಚಳಕದ ಮೂಲಕ ಮೃದಂಗವಾದನ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದ ಬಾಬು ರೈ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜನ್ಮಶತಮಾನೋತ್ಸವ ಸಮಿತಿ ಕಾಯಾಚರಿಸುತ್ತಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶ್ರೀ ಮಠದಲ್ಲಿ ಬಿಡುಗಡೆಗೊಳಿಸಿದರು.
ಜನ್ಮಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ವೆಂಕಟ್ರಮಣ ಹೊಳ್ಳ ಕಾಸರಗೋಡು, ಕಾರ್ಯದರ್ಶಿಗಳಾದ ಜಗದೀಶ್ ಕೂಡ್ಲು, ಗುರುಪ್ರಸಾದ್ ಕೋಟೆಕಣಿ, ಕೋಶಾಧಿಕಾರಿ ಕೆ. ಶಶಿಧರ ಶೆಟ್ಟಿ, ಶ್ರೀಕಾಂತ್ ಕಾಸರಗೋಡು ಉಪಸ್ಥಿತರಿದ್ದರು.


