ನವದೆಹಲಿ: ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರು ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
0
samarasasudhi
ಆಗಸ್ಟ್ 12, 2023
ನವದೆಹಲಿ: ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರು ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಬಗ್ಗೆ ಆಸ್ಟ್ರೇಲಿಯಾ ಸರ್ಕಾರ ಶನಿವಾರ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ವ ಆರ್ಥಿಕ ಸಹಕಾರದ ದೃಷ್ಟಿಯಿಂದ ಜಿ20ಯು ಪ್ರಮುಖ ವೇದಿಕೆಯಾಗಿದೆ.
ಅಂಥೋನಿ ಅವರು ಮುಂದಿನ ತಿಂಗಳು ಮೂರು ರಾಷ್ಟ್ರಗಳಿಗೆ ಪ್ರವಾಸ ಕೈಗೊಳ್ಳಲಿದ್ದು, ಆ ವೇಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇಂಡೊನೇಷ್ಯಾ ಮತ್ತು ಫಿಲಿಪೀನ್ಸ್ ಅಂಥೋನಿ ಅವರು ಭೇಟಿ ನೀಡುವ ಇನ್ನೆರಡು ರಾಷ್ಟ್ರಗಳಾಗಿವೆ.