ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ತಾರತಮ್ಯರಹಿತ ವಾತಾವರಣ ಖಾತ್ರಿಪಡಿಸುವ ಸಂಬಂಧ ತಜ್ಞರ ಸಮಿತಿಯೊಂದನ್ನು ಯುಜಿಸಿ ರಚಿಸಿದೆ.
0
samarasasudhi
ಆಗಸ್ಟ್ 06, 2023
ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ತಾರತಮ್ಯರಹಿತ ವಾತಾವರಣ ಖಾತ್ರಿಪಡಿಸುವ ಸಂಬಂಧ ತಜ್ಞರ ಸಮಿತಿಯೊಂದನ್ನು ಯುಜಿಸಿ ರಚಿಸಿದೆ.
ಪರಿಶಿಷ್ಟ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕುರಿತ ತಾರತಮ್ಯ ತಡೆಯುವುದಕ್ಕೆ ಸಂಬಂಧಿಸಿದ ನಿಯಮಾವಳಿಗಳ ಪರಿಷ್ಕರಣೆ ಹಾಗೂ ಪರಿಹಾರ ಕ್ರಮಗಳ ಕುರಿತು ಸಮಿತಿ ಸಲಹೆಗಳನ್ನು ನೀಡಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಐಟಿ-ಬಾಂಬೆ, ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಹಲವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇತ್ತೀಚೆಗೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಯುಜಿಸಿ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ಹೇಳಿವೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ, ಧರ್ಮ, ಭಾಷೆ, ಲಿಂಗತ್ವ ಅಥವಾ ಅಂಗವೈಕಲ್ಯದ ಆಧಾರದ ಮೇಲೆ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡುವುದನ್ನು ತಡೆಯಲು 2012ರಲ್ಲಿ ಯುಜಿಸಿ ನಿಯಮಾವಳಿಗಳನ್ನು ರೂಪಿಸಿ, ಜಾರಿಗೊಳಿಸಿತ್ತು.