ಕಾಸರಗೋಡು: ರೈಲ್ವೆ ಹಳಿಯಲ್ಲಿ ಕಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳನ್ನು ವಳಪಟ್ಟಣ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬುಧವಾರ ಇಬ್ಬರು ವಿದ್ಯಾರ್ಥಿಗಳು ರೈಲ್ವೆ ಹಳಿಯಲ್ಲಿ ಕಲ್ಲಿರಿಸುವ ಮಧ್ಯೆ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿ ಸೆರೆಹಿಡಿದಿದ್ದಾರೆ. ವಳಪಟ್ಟಣ ಪ್ರದೇಶದಲ್ಲಿ ಈ ಹಿಂದೆಯೂ ಹಲವು ಬಾರಿ ರಐಲ್ವೆ ಹಳಿಯಲ್ಲಿ ಕಲ್ಲಿರಿಸಿದ ಘಟನೆ ನಡೆದಿದಿತ್ತು.
2012ರಲ್ಲಿ ಉಪ್ಪಳ ರೈಲ್ವೆ ನಿಲ್ದಾಣ ಸನಿಹದ ಹಳಿಯಲ್ಲಿ ಕಲ್ಲುಗಳನ್ನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯ ನಿವಾಸಿಗಳು ಸೆರೆಹಿಡಿದ ಪೊಲೀಸರಿಗೊಪ್ಪಿಸಿದ್ದರು. ಪ್ರಾಯಪೂರ್ತಿಯಾಗದ ಹಿನ್ನೆಲೆಯಲ್ಲಿ ಅಂದು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ರೈಲ್ವೆ ಹಳಿಯಲ್ಲಿ ಕಲ್ಲುಗಳನ್ನಿರಿಸುವುದು, ರೈಲುಗಳಿಗೆ ಕಲ್ಲು ತೂರಾಟ ನಡೆಸುವುದು ಗಂಭೀರ ಅಪರಾಧಗಳಾಗಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರೂ ಜಾಗ್ರತೆ ಪಾಲಿಸುವಂತೆ ಪೊಲೀಸರು ತಿಳಿಸಿದ್ದಾರೆ.



