ನವದೆಹಲಿ: ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಜಾಹೀರಾತುಗಳನ್ನು ಪ್ರಕಟಿಸುವ ವಿಚಾರವಾಗಿ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಕಡಿವಾಣ ಹೇರಿದೆ. ಒಂದು ವೇಳೆ ಜಾಹೀರಾತು ಪ್ರದರ್ಶನ ನಿಲ್ಲಿಸದಿದ್ದರೆ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
0
samarasasudhi
ಆಗಸ್ಟ್ 26, 2023
ನವದೆಹಲಿ: ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಜಾಹೀರಾತುಗಳನ್ನು ಪ್ರಕಟಿಸುವ ವಿಚಾರವಾಗಿ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಕಡಿವಾಣ ಹೇರಿದೆ. ಒಂದು ವೇಳೆ ಜಾಹೀರಾತು ಪ್ರದರ್ಶನ ನಿಲ್ಲಿಸದಿದ್ದರೆ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕೆ, ಚಾನೆಲ್, ಸಾಮಾಜಿಕ ಜಾಲತಾಣಗಳಲ್ಲಿ ಆನ್ಲೈನ್ ಬೆಟ್ಟಿಂಗ್ ವಿಷಯದ ಕುರಿತ ಜಾಹೀರಾತುಗಳನ್ನು ತಕ್ಷಣವೇ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು. ಇದಲ್ಲದೆ ಪ್ರಮುಖ ಕ್ರೀಡಾಕೂಟಗಳಲ್ಲಿ ಆನ್ಲೈನ್ ಬೆಟ್ಟಿಂಗ್ ಕುರಿತಾದ ಜಾಹೀರಾತುಗಳನ್ನು ಹೆಚ್ಚಾಗಿ ಪ್ರಸಾರ ಮಾಡಲಾಗುತ್ತದೆ.
ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸಲು ವಿಫಲವಾದಲ್ಲಿ ವಿವಿಧ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಆದೇಶಿಸಲಾಗಿದೆ.
ಮುಂದಿನ ಕೆಲ ದಿನಗಳಲ್ಲಿ ಭಾರತದ ಆತಿಥ್ಯದಲ್ಲಿ ಪ್ರಮುಖ ಕ್ರೀಡಾಕೂಟಗಳು ನಡೆಯಲಿದ್ದು, ಈ ನಿಟ್ಟಿನಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.