ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ಉಳ್ಳಾಲ್ತೀ ಮಹಿಳಾ ಸಂಘದ ವತಿಯಿಂದ 15ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 25ರಂದು ಬೆಳಗ್ಗೆ 9.30ಕ್ಕೆ ದೇವಸ್ಥಾನದಲ್ಲಿ ಜರುಗಲಿದೆ.
ಪೆರಡಾಲದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ:
ಪೆರಡಾಲ ಶ್ರೀ ಉದನೇಶ್ವರ ಸೇವಾ ಸಮಿತಿ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 25ರಂದು ಬೆಳಗ್ಗೆ 10ಕ್ಕೆ ಜರುಗಲಿದೆ. ಅಂದು ಬೆಳಗ್ಗೆ 7.45ಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ 12ಗಂಟೆಗೆ ಶ್ರೀ ವರಮಹಾಲಕ್ಷ್ಮೀ ಪೂಜಾ ಮಂಗಳಾರತಿ ನಡೆಯುವುದು.




