ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಂದಿ ಹಾಡುವ ಮೂಲಕ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಡೇರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
0
samarasasudhi
ಆಗಸ್ಟ್ 22, 2023
ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಂದಿ ಹಾಡುವ ಮೂಲಕ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಡೇರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕಲ್ಯಾಣ್ ಸಿಂಗ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಅಲಿಗಢದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾ, 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಸ್ಥಾನಗಳನ್ನು ಗೆಲ್ಲುವ ಮೂಲಕ ಕಲ್ಯಾಣ್ ಸಿಂಗ್ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.