ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ಬದಿಯಡ್ಕ ವಲಯ ಸಮಿತಿ ನೇತೃತ್ವದಲ್ಲಿ ಶ್ರೀ ಉದನೇಶ್ವರ ದೇವಸ್ಥಾನದ ಸರ್ವಸಮಿತಿ, ಸಂಘಸಂಸ್ಥೆಗಳ ಮತ್ತು ಭಕ್ತ ಜನರ ವತಿಯಿಂದ ಎಡನೀರು ಮಠಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು.
ಶ್ರೀ ಉದನೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರ ವೆಂಕಟರಮಣ ಭಟ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ರೈ ಪೆರಡಾಲಗುತ್ತು, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸೂರ್ಯನಾರಾಯಣ. ಬಿ., ಉಪಾಧ್ಯಕ್ಷ ಪೆÇ್ರಫೆಸರ್ ಶ್ರೀನಾಥ್, ಆಡಳಿತ ಮಂಡಳಿ ಸದಸ್ಯ ಕೃಷ್ಣ ಬದಿಯಡ್ಕ, ಜಗದೀಶ ಪೆರಡಾಲ, ಯುವ ಸಮಿತಿ ಕಾರ್ಯದರ್ಶಿ ಭಾಸ್ಕರ ಪಂಜಿತ್ತಡ್ಕ, ಮಾತೃ ಸಮಿತಿ ಕಾರ್ಯದರ್ಶಿ ಗೀತಾ, ಉಪಾಧ್ಯಕ್ಷೆ ವಿನಯ ರೈ, ಯೋಗೀಶ್ ಪೆರಡಾಲ, ರಾಮ ಮರಿಯಂಕೂಡ್ಲು, ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಿದರು.


