HEALTH TIPS

ಮಕ್ಕಳಲ್ಲಿ ದೇಶಸ್ನೇಹದ ಚಿಂತನೆಯ ಬೀಜವನ್ನು ಬಿತ್ತಬೇಕು: ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ

            ಕುಂಬಳೆ: ದೇಶಕ್ಕಾಗಿ ನಮ್ಮ ಸೇವೆ, ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವತ್ತ ಪ್ರತಿಯೊಬ್ಬರು ಚಿಂತಿಸಿದರೆ ಮಾತ್ರ ನಮ್ಮ ಪೀಳಿಗೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳಾಗಬಲ್ಲರು. ಅವರಲ್ಲಿ ದೇಶಸ್ನೇಹದ ಚಿಂತನೆಯನ್ನು ಹರಿಯಬಿಡಬೇಕು ಎಂದು ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಹೇಳಿದರು.

             ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮಂಗಳವಾರ ಜರಗಿದ ಸ್ವಾತಂತ್ರ್ಯ ಮಹೋತ್ಸವದ ಸಂದಭರ್Àದಲ್ಲಿ ಧ್ವಜಾರೋಹಣಗೈದು ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. 


           ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಶ್ಯಾಂ ಭಟ್ ದರ್ಭೆಮಾರ್ಗ, ಉಪಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಮಾತನಾಡಿದರು. ವಿದ್ಯಾರ್ಥಿಗಳಾದ ಧನ್ವಿ ಬಿ.ಕೆ ಸ್ವಾಗತಿಸಿ, ಪೃಥ್ವಿ ಎಂ ವಂದಿಸಿದರು. ವಿದ್ಯಾರ್ಥಿ ಕನಿಹ ಎಂ ನಿರೂಪಿಸಿದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಪೂರ್ಣ ಎ ಪ್ಲಸ್ ಪಡೆದ ವಿದ್ಯಾರ್ಥಿಗಳಿಗೆ ಸೂರಂಬೈಲಿನ ಜೈಹಿಂದ್ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ವೇದಮೂರ್ತಿ ಕೋಣಮ್ಮೆ ಮಹಾದೇವ ಭÀಟ್ ಹಾಗೂ ಶ್ರೀಕೃಷ್ಣ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಮುಜುಂಗಾವು ಇವರ ಪ್ರಾಯೋಜಕತ್ವದಲ್ಲಿ ಸಿಹಿತಿಂಡಿ ವಿತರಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries