ಕಾಸರಗೋಡು: ಸಾಮರಸ್ಯ ಮತ್ತು ಸಮಾಜಿಕ ಬಾಂಧವ್ಯ ಗಟ್ಟಿಗೊಳಿಸುವಲ್ಲಿ ಓಣಂ ಉತ್ಸವ ಹೆಚ್ಚು ಮಹತ್ವ ಪಡೆದುಕೊಂಡಿರುವುದಾಗಿ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಖಾರಿ ಡಾ. ವೈಭವ್ ಸಕ್ಸೇನಾ ತಿಳಿಸಿದ್ದಾರೆ.
ಅವರು ಕಾಸರಗೋಡು ಪ್ರೆಸ್‍ಕ್ಲಬ್ ವತಿಯಿಂದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಓಣಂ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರೆಸ್‍ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಡಾ. ವೈಭವ್ ಸಕ್ಸೇನಾ ಬಹುಮಾನ ವಿತರಿಸಿದರು. ಇದೇ ಸಂದರ್ಭ ಮಾದಕದ್ರವ್ಯ ಜಾಲ ತಡೆಗಟ್ಟುವಲ್ಲಿ ಹಾಗೂ ಸೇವಾ ತತ್ಪರತೆಗಾಗಿ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾದ ಡಾ. ವೈಭವ್ ಸಕ್ಸೇನಾ ಅವರಿಗೆ ಪ್ರೆಸ್‍ಕ್ಲಬ್ ವತಿಯಿಂದ ವಿಶೇಷ ಪುರಸ್ಕಾರವನ್ನು ಮಹಮ್ಮದ್ ಹಾಶಿಂ ಹಸ್ತಾಂತರಿಸಿದರು. ಉಪಾಧ್ಯಕ್ಷ ಮಹಮ್ಮದ್ ನಹಾಸ್, ಕೋಶಾಧಿಕಾರಿ ಶೈಜು ಪಿಲಾತ್ತರ, ಜತೆಕಾರ್ಯದರ್ಶಿ ಪ್ರದೀಪ್ ನಾರಾಯಣ್, ಕಾರ್ಯಕಾರಿ ಸಮಿತಿ ಸದಸ್ಯ ಅಬ್ದುಲ್ಲಕುಞÂ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ.ವಿ ಪದ್ಮೇಶ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಪುರುಷೋತ್ತಮ ಪೆರ್ಲ ವಂದಿಸಿದರು.
ಬೆಳಗ್ಗೆ ನಡೆದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಉದ್ಘಾಟಿಸಿದರು. ಓಣಂ ಹಬ್ಬದ ಅಂಗವಾಗಿ ಓಣಂ ಔತಣಕೂಟ ಆಯೋಜಿಸಲಾಗಿತ್ತು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಶಾಸಕ ಸಿ.ಎಚ್ ಕುಞಂಬು, ಕೆ.ಪಿ ಕುಞಕಣ್ಣನ್, ಪೊಲೀಸ್ ಅಧಿಕಾರಿಗಳು, ನಾನಾ ಸಂಘ ಸಂಸ್ಥೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಪತ್ರಕರ್ತರು ಹಾಗೂ ಅವರ ಕುಟುಂಬದವರಿಗಾಗಿ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


