ಮುಂಬೈ: ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ.
0
samarasasudhi
ಆಗಸ್ಟ್ 17, 2023
ಮುಂಬೈ: ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ.
ಆಗಸ್ಟ್ 16-17ರಂದು ಮುಂಬೈನಿಂದ ಸುಮಾರು 200 ಕಿ.ಮೀ. ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮ ಧ್ವಜದ ಸಂಶೋಧನಾ ಹಡಗಿನಿಂದ (MV Dong Fang Kan Tan No 2) ತುರ್ತು ವೈದ್ಯಕೀಯ ನೆರವಿಗಾಗಿ ಚೀನಾದ ಪ್ರಜೆಯನ್ನು ರಕ್ಷಿಸಲಾಗಿದೆ ಎಂದು ಇಂಡಿಯನ್ ಕೋಸ್ಟ್ ಗಾರ್ಡ್ ತಿಳಿಸಿದೆ.
ಈ ಸಂದರ್ಭದಲ್ಲಿ ಚೀನಾ ಪ್ರಜೆ ಯಿನ್ ವೈಗ್ಯಾಂಗ್‌ಗೆ ಎದೆ ನೋವು ಹಾಗೂ ಹೃದಯಾಘಾತದ ಲಕ್ಷಣ ಕಾಣಿಸಿಕೊಂಡಿತ್ತು. ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯ ಕುರಿತು ಮುಂಬೈನ ಸಮುದ್ರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ತಲುಪಿಸಲಾಗಿತ್ತು.
ಸುಧಾರಿತ ಹಗುರ ಹೆಲಿಕಾಪ್ಟರ್ (ಎಎಲ್‌ಎಚ್) ಎಂಕೆ-3 ಮೂಲಕ ಚೀನಾ ಪ್ರಜೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ರಕ್ಷಣಾ ಕಾರ್ಯಾಚರಣೆಯ ವಿಡಿಯೊವನ್ನು ಭಾರತೀಯ ಕೋಸ್ಟ್ ಗಾರ್ಡ್ ಹಂಚಿದೆ.