ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಪ್ರೌಢಶಾಲಾಮಟ್ಟದ ವಿಜ್ಞಾನೋತ್ಸವ ನಡೆಯಿತು. ವ್ಯವಸ್ಥಾಪಕ ಶಂಕರನಾರಾಯಣ ಭಟ್ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ಗೋವಿಂದ ಭಟ್ ಮಾತನಾಡಿ, ವಿಜ್ಞಾನೋತ್ಸವ ಉದ್ದೇಶ ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಮಹತ್ವವನ್ನು ವಿವರಿಸಿದರು. ಶಾಲಾ ನೌಕರ ಸಂಘದ ಕಾರ್ಯದರ್ಶಿ ರಾಮಕೃಷ್ಣ ಭಟ್ ಶುಭಾಶಂಸನೆಗೈದರು.
ರಕ್ಷಿತ್ ಕುಮಾರ್ ಸ್ವಾಗತಿಸಿ, ಸೂರ್ಯನಾರಾಯಣ ಭಟ್ ವಂದಿಸಿದರು. ಶಶಿಧರ ಕೆ. ಕಾರ್ಯಕ್ರಮ ನಿರೂಪಿಸಿದರು. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಐಟಿ, ವೃತ್ತಿ ಪರಿಚಯ ಮೇಳಗಳಲ್ಲಿ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.




.jpg)
