ಬದಿಯಡ್ಕ: ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಪ್ರಬಂಧಕ ಶ್ರೀ ಸೂರ್ಯ ಎನ್ ಶಾಸ್ತ್ರಿ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಾಫಿ ಚೂರಿಪಳ್ಳ ಅಧ್ಯಕ್ಷತೆವಹಿಸಿದರು.
ಮುಖ್ಯ ಅತಿಥಿಗಳಾಗಿ ಪೆರಡಾಲ ಎಜುಕೇಷನ್ ಸೊಸೈಟಿ ಕೋಶಾಧಿಕಾರಿ ವೆಂಕಟರಮಣ ಭಟ್ ಮಾತನಾಡಿ ಸ್ವಾತಂತ್ರ್ಯೋತ್ಸವ ಎಲ್ಲರಿಗೂ ಮಹತ್ವದ ದಿನ. ಹಲವು ವೀರರ ತ್ಯಾಗದ ಮತ್ತು ತಪಸ್ಸಿನ ಫಲವನ್ನು ನಾವು ಅನುಭವಿಸುತ್ತಿದ್ದೇವೆ ಎಂದು ಹೇಳಿದರು.
ಆಡಳಿತ ಮಂಡಳಿ ಸದಸ್ಯ ಕೃಷ್ಣ ಪ್ರಸಾದ್ ರೈ, ನಿವೃತ್ತ ಮುಖ್ಯೋಪಾಧ್ಯಾಯ ಈಶ್ವರ ಭಟ್ ಪೆರ್ಮುಖ, ಶಾಲಾ ನೌಕರ ಸಂಘದ ಕಾರ್ಯದರ್ಶಿ ಪ್ರಭಾವತಿ ಟೀಚರ್ ಶುಭ ಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಮಾತೃ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಅಧ್ಯಾಪಕರಾದ ಪ್ರಭಾಕರ ನಾಯರ್, ನಿರಂಜನ್ ರೈ ಪೆರಡಾಲ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ, ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಿತು. ವೇದಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಲಿಟಲ್ ಕೈಟ್ ಯೂನಿಟ್ ನ ವಿದ್ಯಾರ್ಥಿಗಳಿಗೆ ನೂತನ ಸಮವಸ್ತ್ರ ಬಿಡುಗಡೆಗೊಳಿಸಲಾಯಿತು. ಪ್ರಾಂಶುಪಾಲ ಮಾಧವನ್ ಭಟ್ಟತ್ತಿರಿ ಸ್ವಾಗತಿಸಿ, ಕಾರ್ಯಕ್ರಮದ ಪ್ರಧಾನ ಸಂಚಾಲಕ ರಾಮಕೃಷ್ಣ ಮಾಸ್ತರ್ ವಂದಿಸಿದರು. ಕಾರ್ಯಕ್ರಮದ ಸಂಚಾಲಕ ಕುಮಾರ ಪ್ರಸಾದ್ ಮುಂಗಿಲ ನೇತೃತ್ವ ನೀಡಿದರು. ಕೃಷ್ಣ ಯಾದವ್, ರಾಜೇಶ್ ಮಾಸ್ತರ್ ಸಹಕರಿಸಿದರು. ನಾರಾಯಣ ಅಸ್ರ ಕಾರ್ಯಕ್ರಮ ನಿರೂಪಿಸಿ ವ|ಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.




.jpg)
.jpg)
