ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದಾರೆ.
0
samarasasudhi
ಆಗಸ್ಟ್ 09, 2023
ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. ಈಗ ಎರಡನೇ ಹಂತದಲ್ಲಿ ಗುಜರಾತ್‌ನಿಂದ ಮೇಘಾಲಯಕ್ಕೆ ಯಾತ್ರೆ ಹಮ್ಮಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಸುಮಾರು 4,000 ಕಿ.ಮೀ. ಪಾದಯಾತ್ರೆ ನಡೆಸಿದ್ದರು. 2022 ಸೆಪ್ಟೆಂಬರ್ 7ರಂದು ಆರಂಭವಾದ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯಗೊಂಡಿತ್ತು. 130 ದಿನಗಳ ಕಾಲ 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು.