ಕಾಸರಗೋಡು: ಮಹಾತ್ಮಾ ಗಾಂಧಿ ಅವರ 154 ನೇ ಜನ್ಮದಿನದ ಅಂಗವಾಗಿ ಆಯೋಜಿಸುತ್ತಿರುವ ಗಾಂಧಿಜಯಂತಿ ವಾರಾಚರಣೆಯನ್ನು ಖಾದಿ ಮಂಡಳಿಯು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. ಇದರ ಅಂಗವಾಗಿ ಹೈಸ್ಕೂಲ್, ಹೈಯರ್ ಸೆಕೆಂಡರಿ ಸ್ಕೂಲ್ ಆಧಾರಿತ (ಎಂಟರಿಂದ ರಿಂದ 12 ರವರೆಗೆ) ವಿದ್ಯಾರ್ಥಿಗಳಿಗಾಗಿ ಕಾಂಞಂಗಾಡ್ ಮಾವುಂಗಾಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಛೇರಿಯಲ್ಲಿ ಅಕ್ಟೋಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕ್ವಿಜ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
'ಗಾಂಧಿಜೀಯೂ ಖಾದಿಯೂ ಮತ್ತು ಸ್ವಾತಂತ್ರ್ಯ ಹೋರಾಟವೂ' ಎಂಬ ವಿಷಯದಲ್ಲಿ ಕ್ವಿಜ್ ಸ್ಪರ್ಧೆ ನಡೆಯುತ್ತಿದೆ. ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಶಾಲಾ ಅಧಿಕಾರಿಗಳು ದೃಢೀಕರಿಸಿದ ಪತ್ರದ ಮೂಲಕ ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಚೇರಿಯನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10 ರಿಂದ ಸಂಜೆ ಐದು ಗಂಟೆಯೊಳಗೆ ಕಚೇರಿಯನ್ನು ಸಂಪರ್ಕಿಸಬಹುದಾಘಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (0467 2200585, 9497854529)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

