HEALTH TIPS

ಮುಂಬೈ: ಓಶಿವಾರದ ಶಾಪಿಂಗ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ರಕ್ಷಣೆ

              ಮುಂಬೈ: ಮುಂಬೈನ ಉಪನಗರ ಓಶಿವಾರದಲ್ಲಿರುವ ಹಿರಾ ಪನ್ನಾ ಮಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

            ಮಧ್ಯಾಹ್ನ 3.10ರ ಸುಮಾರಿಗೆ ಓಶಿವಾರಾ ಪೊಲೀಸ್ ಠಾಣೆ ಸಮೀಪವಿರುವ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಂತಸ್ತಿನ ಕಟ್ಟಡದಿಂದ ಮಹಿಳೆ ಸೇರಿದಂತೆ ಕನಿಷ್ಠ 14 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

             ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಮೂವರು ಸಿಬ್ಬಂದಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

           ಶುಕ್ರವಾರ  12 ಅಗ್ನಿಶಾಮಕ ಇಂಜಿನಿಯರ್ ಗಳು ಸೇರಿದಂತೆ 25 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

                 ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿಲ್ಲವಾದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries