HEALTH TIPS

ವಿಶೇಷ ಅಧಿವೇಶನ: ಸೆ.17ರಂದು ಸರ್ವ ಪಕ್ಷಗಳ ಸಭೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

                ವದೆಹಲಿ :ಸೆಪ್ಟೆಂಬರ್‌ 18ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಮುನ್ನಾದಿನ (ಸೆ.17ರಂದು) ಸಂಜೆ 4.30ಕ್ಕೆ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

               ಪೂರ್ವಭಾವಿ ಸಭೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸೆಪ್ಟೆಂಬರ್ 18 ರಿಂದ ಐದು ದಿನಗಳ ಸಂಸತ್ತು ವಿಶೇಷ ಅಧಿವೇಶನದ ಕುರಿತು ಚರ್ಚಿಸಲು ಭಾನುವಾರ (ಸೆ.17ರಂದು) ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ.

                   ಎಲ್ಲ ನಾಯಕರಿಗೂ ಈ ಕುರಿತು ಇ-ಮೇಲ್ ಮೂಲಕ ಮಾಹಿತಿ ನೀಡಿ, ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

                ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ ಎಂದು ಜೋಶಿ ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries