HEALTH TIPS

ಮಣಿಪುರದ 5 ಕಣಿವೆ ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ

            ಇಂಫಾಲ: ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಕರ್ಫ್ಯೂ ಘೋಷಣೆ ಮಾಡಿದ ಮರುದಿನವೇ, ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ.

           ಜನರಿಗೆ ಆಹಾರ, ಔಷಧ ಸೇರಿ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ನೀಡುವ ಸಲುವಾಗಿ ಬೆಳಿಗ್ಗೆ 5 ರಿಂದ ಸಂಜೆ 6ರವರೆಗೆ ಕರ್ಪ್ಯೂ ಸಡಿಲಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

             ಬುಧವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯಲ್ಲಿ ಕರ್ಫ್ಯೂ ಸಡಿಲಿಕೆ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಫಾಲ ಪಶ್ಚಿಮ, ಇಂಫಾಲ ಪೂರ್ವ ಹಾಗೂ ಕಾಕ್‌ಚಿಂಗ್‌ ಜಿಲ್ಲೆಗಳಲ್ಲಿ ಗುರುವಾರ ಬೆಳಿಗ್ಗೆ 5ರಿಂದ ಸಂಜೆ 6 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ತೌಬಾಲ್ ಜಿಲ್ಲೆಯಲ್ಲಿ ಬೆಳಿಗ್ಗೆ 5 ರಿಂದ ರಾತ್ರಿ 8ರ ವರೆಗೆ ನಿರ್ಬಂಧ ಸಡಿಲಿಸಲಾಗಿದೆ.

              ವಿಷ್ಣುಪುರ ಜಿಲ್ಲೆಯಲ್ಲಿ ಬೆಳಿಗ್ಗೆ 5 ರಿಂದ 11ರ ವರೆಗೆ ಕರ್ಫ್ಯೂ ನಿಯಮಗಳನ್ನು ಸರಳಗೊಳಿಸಲಾಗಿದೆ.

               ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿದರೂ, ಅನುಮತಿ ಪಡೆಯದೆ ಒಟ್ಟು ಸೇರುವುದು, ಪ್ರತಿಭಟನೆ ಅಥವಾ ರ‍್ಯಾಲಿ ನಡೆಸುವುದಕ್ಕೆ ಅವಕಾಶ ಇಲ್ಲ ಎಂದು ಅಧಿಕೃತ ಆದೇಶದಲ್ಲಿ ಹೇಳಲಾಗಿದೆ.


ಮಂಗಳವಾರ ಈ ಐದೂ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries