ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿ ಸ್ಥಳದಲ್ಲಿ ನಡೆಸಿದ ಉತ್ಖನನದ ಸಮಯದಲ್ಲಿ ಪ್ರಾಚೀನ ದೇವಾಲಯದ ಹಲವು ಅವಶೇಷಗಳು ದೊರೆತಿವೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.
0
samarasasudhi
ಸೆಪ್ಟೆಂಬರ್ 13, 2023
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿ ಸ್ಥಳದಲ್ಲಿ ನಡೆಸಿದ ಉತ್ಖನನದ ಸಮಯದಲ್ಲಿ ಪ್ರಾಚೀನ ದೇವಾಲಯದ ಹಲವು ಅವಶೇಷಗಳು ದೊರೆತಿವೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.
ಕಳೆದ ವಾರ ಎಕ್ಸ್ ಖಾತೆಯಲ್ಲಿ ರಾಮ ಮಂದಿರ ಮೊದಲನೇ ಮಹಡಿಯ ನಿರ್ಮಾಣ ಕಾರ್ಯದ ಫೋಟೊಗಳನ್ನು ಹಂಚಿಕೊಳ್ಳಲಾಗಿತ್ತು.
ಸೆ.5ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಯೋಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.