ತಿರುವನಂತಪುರಂ :ನಿಫಾ ವೈರಸ್ನಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವರು ಘೋಷಣೆ ಮಾಡಿದ ಬೆನ್ನಿಗೇ ದೇಶದಲ್ಲೊಂದು ಆತಂಕದ ಛಾಯೆ ಆವರಿಸಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ಮಾಸ್ಕ್ ಧರಿಸಬೇಕು ಎಂಬ ಸೂಚನೆಯೊಂದು ಕೂಡ ಹೊರಬಿದ್ದಿದೆ.
ನಿಫಾ ವೈರಸ್ ಸೋಂಕಿನಿಂದಾಗಿ ಕೇರಳದ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಬೆನ್ನಿಗೇ ಚುರುಕುಗೊಂಡಿರು ಕೇರಳ ರಾಜ್ಯ ಸರ್ಕಾರ ಅಲ್ಲಿ ನಿಯಂತ್ರಣಾ ಕೊಠಡಿಗಳನ್ನು ಕೂಡ ಸ್ಥಾಪಿಸಿದೆ.
ನಿಫಾ ವೈರಸ್ ಸೋಂಕಿನಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದು, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ತಾವು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯ ವರದಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ಅಲ್ಲಿನ ಅಧಿಕಾರಿಗಳನ್ನು ನಾನು ಸಂಪರ್ಕಿಸಿದ್ದು, ಕೆಲವೇ ಗಂಟೆಗಳಲ್ಲಿ ಖಚಿತ ಮಾಹಿತಿ ಲಭಿಸಲಿದೆ ಎಂದಿದ್ದಾರೆ.
ಈ ಮಧ್ಯೆ ನಾವು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಕೇರಳ ಸರ್ಕಾರ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. 16 ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಸೇರಿಂದತೆ ಸೋಂಕು ತಡೆ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಪಾಲಿಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದನ್ನೂ ತಪ್ಪಿಸಿ ಎಂದೂ ಅವರು ಕೇಳಿಕೊಂಡಿದ್ದಾರೆ.